Saturday, January 19, 2013

ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ ನಿಷೇಧ: ಸುಪ್ರೀಂ



ಜನವರಿ -19-2013

  ಹೊಸದಿಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಯಾವುದೇ ಪ್ರತಿಮೆಗಳು ಮತ್ತು ಇತರ ಕಾಮಗಾರಿಗಳಿಗೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ.ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳ ಸ್ಥಾಪನೆ ಅಥವಾ ಸುಗಮ ಸಂಚಾರಕ್ಕೆ ಅಡಚಣೆ ಮಾಡುವಂತಹ ಕಾಮಗಾರಿ ಗಳಿಗೆ ಅನುಮತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಇಂದು ಎಲ್ಲ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡ ಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಮುಖ ನಾಯಕರೊಬ್ಬರ ಪ್ರತಿಮೆ ಸ್ಥಾಪನೆಗೆ ಕೇರಳ ಸರಕಾರ ಅನುಮತಿ ನೀಡಲು ನಿರ್ಧಾರ ತೆಗೆದುಕೊಂಡುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಂ.ಲೋಧಾ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯರಿದ್ದ ಪೀಠ ಈ ಆದೇಶ ಹೊರಡಿಸಿತು.
ವಾಹನ ದಟ್ಟಣೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸುವುದಕ್ಕೆ ತೆಗೆದುಕೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೀಠ, ಮುಂದಿನ ಆದೇಶ ನೀಡುವವರೆಗೂ ಯಥಾಸ್ಥಿತಿ ಕಾಪಾಡುವಮತೆ ಕೇರಳ ಸರಕಾರಕ್ಕೆ ನಿರ್ದೇಶಿಸಿದೆ.
ಸಂಚಾರ ದಟ್ಟಣೆಗೆ ಅಡಚಣೆಯನ್ನುಂಟು ಮಾಡುವ ಸಾರ್ವಜನಿಕ ಪ್ರದೇಶಗಳು, ರಸ್ತೆಗಳು ಮತ್ತು ಸಾರ್ವಜನಿಕ ಉಪಯೋಗದ ಸ್ಥಳಗಳಲ್ಲಿ ಯಾವುದೇ ರೀತಿಯ ಪ್ರತಿಮೆಗಳನ್ನು ಸ್ಥಾಪಿಸುವುದಕ್ಕೆ ಮತ್ತು ಇತರೆ ನಿರ್ಮಾಣಾ ಕಾರ್ಯಗಳನ್ನು ನಡೆಸುವುದಕ್ಕೆ ಅನುಮತಿ ನೀಡಬಾರದು ಎಂದಿರುವ ಪೀಠ, ಈ ಆದೇಶ ಎಲ್ಲಾ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗಲಿದೆ ಎಂದಿದೆ.

No comments:

Post a Comment