Thursday, February 14, 2013

ಗಾಂಜಾ ಮಾರಾಟ ಆರೋಪ: ವಿದ್ಯಾರ್ಥಿ ಸೆರೆ



ಶಿವಮೊಗ್ಗ:ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಕಾಂ ಪದವಿ ಓದುತ್ತಿರುವ ವಿದ್ಯಾರ್ಥಿಯೋರ್ವನನ್ನು ಡಿವೈಎಸ್‌ಪಿ ನೇತೃತ್ವದ ಪೊಲೀಸ್ ತಂಡ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಲಾಸ್ (19) ಬಂಧಿತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ಮೂಲತಃ ಶಿವಮೊಗ್ಗದ ರಾಜೇಂದ್ರ ನಗರ ಬಡಾವಣೆಯ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಜಯನಗರದಲ್ಲಿ ವಾಸವಾಗಿದ್ದು, ಅಲ್ಲಿನ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ. ಈತ ನೆಹರೂ ಕ್ರೀಡಾಂಗಣದ 2ನೆ ಮುಖ್ಯ ಗೇಟ್‌ನ ಮರವೊಂದರ ಬಳಿ ಗಾಂಜಾ ಮಾರಾಟ ಮಾಡಲು ನಿಂತಿದ್ದು, ಈ ಕುರಿತಂತೆ ಖಚಿತ ವರ್ತಮಾನ ಪಡೆದಿದ್ದ ಡಿವೈಎಸ್‌ಪಿ ರಾಮಾನಾಯ್ಕಾರವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಬ್ಯಾಗ್ ಪರಿಶೀಲನೆ ನಡೆಸಿದಾಗ ಗಾಂಜಾ ಇರುವುದು ಬೆಳಕಿಗೆ ಬಂದಿದೆ. ಈ ಕುರಿತಂತೆ ತನಿಖೆ ನಡೆಸಿದಾಗ ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಆತನಿಂದ ಪೊಲೀಸರು ಸುಮಾರು 1 ಕೆ.ಜಿ. 50 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

No comments:

Post a Comment