Friday, February 1, 2013

ಪತ್ರಕರ್ತ ಸೂರಿಂಜೆ ವಿರುದ್ಧದ ಪ್ರಕರಣ ರದ್ದು: ರಾಜ್ಯ ಸಂಪುಟದ ನಿರ್ಣಯಬೆಂಗಳೂರು: ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ನವೀನ್ ಸೂರಿಂಜೆ ವಿರುದ್ಧದ ಪ್ರಕರಣ ಕೈ ಬಿಡಲು ಸಚಿವ ಸಂಪುಟ ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯಹವಾರಗಳ ಸಚಿವ ಸುರೇಶ್‌ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು. ಮಂಗಳೂರಿನ ಮಾರ್ನಿಂಗ್‌ಮಿಸ್ಟ್ ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ನವೀನ್ ಸೂರಿಂಜೆ ವಿರುದ್ಧದ ಪ್ರಕರಣ ಕೈ ಬಿಡುವಂತೆ ಸರಕಾರದ ಮುಂದೆ ಬಂದಿದ್ದ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.
ಹೋಮ್‌ಸ್ಟೇಯಲ್ಲಿ ಮಹಿಳೆಯರ ಮೇಲೆ ದುಷ್ಕರ್ಮಿಗಳು ನಡೆಸಿದ ಬರ್ಬರ ದಾಳಿಯ ಅರಿವಿದ್ದರೂ ಪೊಲೀಸರಿಗೆ ಮಾಹಿತಿ ನೀಡದ ಕಾರಣಕ್ಕಾಗಿ ಸೂರಿಂಜೆಯ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಕೈಬಿಡುವಂತೆ ಪತ್ರಕರ್ತರೂ ಸೇರಿದಂತೆ ಮಾನವ ಹಕ್ಕು ಹೋರಾಟಗಾರರು ಬೆಂಗಳೂರಿನಲ್ಲಿ ಇತ್ತೀಚೆಗೆ ಧರಣಿ ನಡೆಸಿದ್ದರು

No comments:

Post a Comment