Wednesday, April 17, 2013

ಬಾಂಬ್ ಸ್ಫೋಟ: 12 ಮಂದಿಗೆ ಗಾಯ


ಬಾಂಬ್ ಸ್ಫೋಟ: 12 ಮಂದಿಗೆ ಗಾಯ


ಏಪ್ರಿಲ್ -17-2013

 ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯ ಮುಂಭಾಗದ ದೇಗುಲದ ಎದುರಿನಲ್ಲಿ ಬಾಂಬ್ ಸ್ಫೋಟಗೊಂಡು 3 ಕಾರು ಕಾರುಗಳು ಬೆಂಕಿಗೆ ಆಹುತಿಯಾಗಿದ್ದು, 12ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ದುಷ್ಕರ್ಮಿಗಳು ಬೈಕ್‌ನಲ್ಲಿ ಇರಿಸಿದ್ದ ಬಾಂಬ್ ಸ್ಫೋಟಗೊಂಡು 1ಕೆಎಸ್‌ಆರ್‌ಪಿ ಪೊಲೀಸ್ ವಾಹನ ಜಖಂಗೊಂಡಿದ್ದು, 2 ಓಮ್ನಿ ಕಾರು, 1 ಸ್ಯಾಂಟ್ರೊ ಕಾರು, 3 ಬೈಕ್‌ಗಳು ಬೆಂಕಿಗೆ ಆಹುತಿಯಾಗಿದೆ. ಇದರಿಂದ 12ಮಂದಿ ಗಾಯಗೊಂಡಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರಲ್ಲಿ 7 ಮಂದಿ ಪೊಲೀಸರು 5 ಮಂದಿ ಸ್ಥಳೀಯರು ಸೇರಿದ್ದಾರೆ. ಇವರನ್ನು ಬಾಲಕೃಷ್ಣ, ಸದಿನ್ ಷಾ, ವಿಶ್ವೇಶ್ವರಯ್ಯ ಎಂದು ಗುರುತಿಸಲಾಗಿದೆ. ಸ್ಥಳೀಯ ವಿದ್ಯಾರ್ಥಿನಿಯರಾದ ನಿಶಾ (18) ಮತ್ತು ರಕ್ಷಿತಾ (20) ಎಂಬವರಿಗೆ ಗಂಭೀರ ಗಾಯವಾಗಿದೆ. ಇವರು ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಠಾಣಾ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮಂದುವರಿಸಿದ್ದಾರೆ. ಹಾಗೂ ಅಗ್ನಿಶಾಮಕ ಸಿಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ.
ಪೊಲೀಸ್ ಮೂಲಗಳ ಅನ್ವಯ ಬೈಕ್‌ನಲ್ಲಿ ಬಾಂಬ್ ಸ್ಫೋಟಗೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಥಳಕ್ಕೆ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

No comments:

Post a Comment