Friday, April 12, 2013

ದ್ವೇಷದ ಕೆನ್ನಾಲಿಗೆ: 5 ಮಂದಿ ಸಜೀವ ದಹನ

 ಮೈಸೂರು, : ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐದು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸ ಇದಾಗಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇಂದು ಬೆಳಗಿನ ಜಾವ ಮೈಸೂರಿನ ಅಜೀಜ್ ಸೇಠ್ ನಗರದ ಬಿಡಿ ಮೊಹಲ್ಲಾದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಮೂವರಿಗೆ ತೀವ್ರ ಗಾಯಗಳಾಗಿದ್ದು, ಸಮೀಪದ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಹೊರಗಿನಿಂದ ಚಿಲಕ ಹಾಕಿ ಬೆಳಗಿನ ಜಾವ 3.30ರಲ್ಲಿ ಮನೆಗೆ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿದ ನಂತರವೇ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದೆ ಎಂದು ತಿಳಿದುಬಂದಿದೆ.   ಉದಯಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಯ ಯಜಮಾನ ಷರೀಫ್ ಹಣದ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಷರೀಫ್, ಪರ್ವೀನ್, ರಿಜ್ನಾನ್ ಮೃತರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ರೇಷ್ಮಾ ಬಾನು ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ


No comments:

Post a Comment