Tuesday, April 16, 2013

ಕ್ರೂಸರ್ ಪಲ್ಟಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ ಏಪ್ರಿಲ್ -16-2013

ಬಳ್ಳಾರಿ, : ರಾಜ್ಯ ಹೆದ್ದಾರಿಯ ಸೋಮಸಮುದ್ರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಈವಾಗ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 
ಪರಿಣಾಮ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಣಿಚಂದ್ರ, ಲಕ್ಷ್ಮೀ ಎಂಬವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಸ್ ವಾಹನ ಪಲ್ಟಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ರಿಂದ 10 ಜನ ತೀವ್ರವಾಗಿ ಗಾಯಗೊಂಡಿರುವ ಸೋಮವಾರ(ಎ.15) ನಡೆದಿದೆ.
ಸೋಮಸಮುದ್ರದ ಬಳಿಯಿರುವ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಟ್ರ್ಯಾಕ್ಸ್ ವಾಹನ, ರಸ್ತೆಯ ತಿರುವಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಮಗುಚಿಕೊಂಡಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಸೇರಿದಂತೆ 6 ಮಂದಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ವಾಹನದಲ್ಲಿದ್ದ 8-10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರು ಕುರುಗೋಡು ಮೂಲದವರು ಎನ್ನಲಾಗಿದೆ.
ವಾಹನದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿದ್ದು, ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳಿದ ಗಾಯಾಳುಗಳ ಸ್ಥಿತಿ ಕೂಡಾ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

No comments:

Post a Comment