Monday, April 15, 2013

ನಾಮಪತ್ರ ಸಲ್ಲಿಕೆಗೆ ಮುಗಿಬಿದ್ದ ಅಭ್ಯರ್ಥಿಗಳುಘಟಾನುಘಟಿ ಮುಖಂಡರ ಉಮೇದುವಾರಿಗೆ ಸಲ್ಲಿಕೆ ಏಪ್ರಿಲ್ -15-2013

ನಾಮಪತ್ರ ಸಲ್ಲಿಕೆಗೆ ಮುಗಿಬಿದ್ದ ಅಭ್ಯರ್ಥಿಗಳು
ಘಟಾನುಘಟಿ ಮುಖಂಡರ ಉಮೇದುವಾರಿಗೆ ಸಲ್ಲಿಕೆ
ಬೆಂಗಳೂರು, ಎ.15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಘಟಾನುಘಟಿ ಮುಖಂಡರುಗಳಾದ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಹಿತ ಹಲವು ಅಭ್ಯರ್ಥಿಗಳು ತಮ್ಮ ಇಷ್ಟದ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್‌ವೈ ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಬಂದು ಶಿಕಾರಿಪುರದ ತಹಶಿಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಡಾ.ಜಿ.ಪರಮೇಶ್ವರ್ ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ರೊಂದಿಗೆ ಮೆರವಣಿಗೆಯಲ್ಲಿ ಧಾವಿಸಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದು ವಾರಿಕೆ ಸಲ್ಲಿಸಿದರು.
 ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ತಮ್ಮ ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಉಮೇದುವಾರಿಗೆ ಸಲ್ಲಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ತಹಶಿಲ್ದಾರ್ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ವಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಇಷ್ಟದ ದೈವ ಸಿದ್ದರಾಮನ ಹುಂಡಿಯಲ್ಲಿನ ಗ್ರಾಮ ದೇವತೆಗಳಿಗೆ ಪೂಜೆ ಸಲ್ಲಿಸಿದ ಬಳಿಕ ವರುಣಾ ಕ್ಷೇತ್ರದಿಂದ ತಮ್ಮ ಉಮೇದುವಾರಿಗೆ ಸಲ್ಲಿಸಿದರು. ಕಾನೂನು ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಹಾಗೂ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಕೆಜೆಪಿ ಅಭ್ಯರ್ಥಿ ಯಾಗಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಅಲ್ಲದೆ, ಶಾಸಕಿ ಅನಿತಾ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ, ಸಚಿವ ಬಾಲಚಂದ್ರ ಜಾರಕಿಹೊಳಿ ಅರಬಾವಿ ವಿಧಾನಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಶೆಟ್ಟಿ ಕಣಕ್ಕೆ: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಮಾಲೂರು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರು.
 ಬಿಸಿಲನಾಡು ರಾಯಚೂರಿನಲ್ಲಿ ಮಳೆ ಹುಡುಗಿ ಪೂಜಾ ಗಾಂಧಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಸಚಿವ ಸಿ.ಟಿ.ರವಿ ಬಾಬಾಬುಡಾನ್ ಗಿರಿ ದತ್ತಾತ್ರೇಯ ಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿ ಚಿಕ್ಕಮಗಳೂರು ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಘಟಾನುಘಟಿ ರಾಜಕೀಯ ಮುಖಂಡರು ಸೋಮವಾರ ಶುಭದಿನದ ಎಂಬ ನಂಬಿಕೆಯಲ್ಲಿ ತಮ್ಮ ಉಮೇದು ವಾರಿಕೆ ಸಲ್ಲಿಸಲು ಚುನಾವಣಾ ಕಚೇರಿಗಳಿಗೆ ಮುಗಿಬಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಕರ್ತರ ನಿಯಂತ್ರಣಕ್ಕೆ ಹರಸಾಹಸ ಪಡಬೇಕಾಯಿತು.
 ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕೆಜೆಪಿ ಹಾಗೂ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಪಕ್ಷಗಳ ‘ಬಿ’ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಎ.17 ಕೊನೆಯ ದಿನವಾಗಿದ್ದು, ನಾಳೆ (ಎ.16) ಮಂಗಳವಾರ ಆಗಿರುವ ಹಿನ್ನೆಲೆಯಲ್ಲಿ ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಗೋಜಿಗೆ ಹೋಗಲಾರರು. ಹೀಗಾಗಿ ಇಂದು ನಾಮಪತ್ರ ಸಲಿಕೆಗೆ ಒಂದು ರೀತಿಯಲ್ಲಿ ನೂಕು ನುಗ್ಗಲು ಸೃಷ್ಟಿಯಾಗಿತ್ತು.
ಬೆಂಗಳೂರು, ಎ.15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಘಟಾನುಘಟಿ ಮುಖಂಡರುಗಳಾದ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಹಿತ ಹಲವು ಅಭ್ಯರ್ಥಿಗಳು ತಮ್ಮ ಇಷ್ಟದ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿಎಸ್‌ವೈ ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಬಂದು ಶಿಕಾರಿಪುರದ ತಹಶಿಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಡಾ.ಜಿ.ಪರಮೇಶ್ವರ್ ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ರೊಂದಿಗೆ ಮೆರವಣಿಗೆಯಲ್ಲಿ ಧಾವಿಸಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದು ವಾರಿಕೆ ಸಲ್ಲಿಸಿದರು.
ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ತಮ್ಮ ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಉಮೇದುವಾರಿಗೆ ಸಲ್ಲಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ತಹಶಿಲ್ದಾರ್ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ವಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಇಷ್ಟದ ದೈವ ಸಿದ್ದರಾಮನ ಹುಂಡಿಯಲ್ಲಿನ ಗ್ರಾಮ ದೇವತೆಗಳಿಗೆ ಪೂಜೆ ಸಲ್ಲಿಸಿದ ಬಳಿಕ ವರುಣಾ ಕ್ಷೇತ್ರದಿಂದ ತಮ್ಮ ಉಮೇದುವಾರಿಗೆ ಸಲ್ಲಿಸಿದರು. ಕಾನೂನು ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಹಾಗೂ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಕೆಜೆಪಿ ಅಭ್ಯರ್ಥಿ ಯಾಗಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.ಅಲ್ಲದೆ, ಶಾಸಕಿ ಅನಿತಾ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ, ಸಚಿವ ಬಾಲಚಂದ್ರ ಜಾರಕಿಹೊಳಿ ಅರಬಾವಿ ವಿಧಾನಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.ಪಕ್ಷೇತರ ಅಭ್ಯರ್ಥಿಯಾಗಿ ಶೆಟ್ಟಿ ಕಣಕ್ಕೆ: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಮಾಲೂರು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರು. ಬಿಸಿಲನಾಡು ರಾಯಚೂರಿನಲ್ಲಿ ಮಳೆ ಹುಡುಗಿ ಪೂಜಾ ಗಾಂಧಿ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಸಚಿವ ಸಿ.ಟಿ.ರವಿ ಬಾಬಾಬುಡಾನ್ ಗಿರಿ ದತ್ತಾತ್ರೇಯ ಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿ ಚಿಕ್ಕಮಗಳೂರು ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಕೆ ಮಾಡಿದರು.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಘಟಾನುಘಟಿ ರಾಜಕೀಯ ಮುಖಂಡರು ಸೋಮವಾರ ಶುಭದಿನದ ಎಂಬ ನಂಬಿಕೆಯಲ್ಲಿ ತಮ್ಮ ಉಮೇದು ವಾರಿಕೆ ಸಲ್ಲಿಸಲು ಚುನಾವಣಾ ಕಚೇರಿಗಳಿಗೆ ಮುಗಿಬಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಕರ್ತರ ನಿಯಂತ್ರಣಕ್ಕೆ ಹರಸಾಹಸ ಪಡಬೇಕಾಯಿತು. 
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕೆಜೆಪಿ ಹಾಗೂ ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಪಕ್ಷಗಳ ‘ಬಿ’ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಎ.17 ಕೊನೆಯ ದಿನವಾಗಿದ್ದು, ನಾಳೆ (ಎ.16) ಮಂಗಳವಾರ ಆಗಿರುವ ಹಿನ್ನೆಲೆಯಲ್ಲಿ ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಗೋಜಿಗೆ ಹೋಗಲಾರರು. ಹೀಗಾಗಿ ಇಂದು ನಾಮಪತ್ರ ಸಲಿಕೆಗೆ ಒಂದು ರೀತಿಯಲ್ಲಿ ನೂಕು ನುಗ್ಗಲು ಸೃಷ್ಟಿಯಾಗಿತ್ತು.

No comments:

Post a Comment