Thursday, May 2, 2013

ದ.ಕ.: ಉಮ್ಮನ್ ಚಾಂಡಿ ಭೇಟಿ ಮೇ -02-2013

ಮಂಗಳೂರು: ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು ಮೇ 2ರಂದು ದ.ಕ. ಜಿಲ್ಲೆಗೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಮ್ಮನ್ ಚಾಂಡಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಗ್ಗೆ 9:30ಕ್ಕೆ ಬಲ್ಮಠದ ಸಹೋದಯ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿರುವ ಅವರು, 11 ಗಂಟೆಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿ.ಸಿ.ರೋಡ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿಂದ ಬೆಳ್ತಂಗಡಿಗೆ ತೆರಳಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಅಂದು ಸಂಜೆ ಸಂಜೆ 4 ಗಂಟೆಗೆ ಕಡಬದಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುವರು. ಸಂಜೆ 6 ಗಂಟೆಗೆ ಮಂಗಳೂರು ವಿಧಾನಸಭಾ ಕ್ಷೇತ್ರದ ದೇರಳಕಟ್ಟೆ ಯಲ್ಲಿ ಚುನಾವಣಾ ಪ್ರಚಾರ ಸಬೆಯಲ್ಲಿ ಭಾಗವಹಿಸುವರು. ಅವರ ಜೊತೆ ಅಖಿಲ ಭಾರತ ಕಾಂಗ್ರೆಸ್ ಕಾರ್ಯದರ್ಶಿ ಶಾನಿ ಮೋಳ್, ಕೇರಳ ಕಣ್ಣೂರು ಶಾಸಕ ಅಬ್ದುಲ್ಲಾ ಕುಟ್ಟಿ, ಪ್ರೊ. ರಾಧಾಕೃಷ್ಣ ಹಾಗೂ ಜಿಲ್ಲೆಯ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲೆಯಾದ್ಯಂತ ಪ್ರಸ್ತುತ ಕಾಂಗ್ರೆಸ್ ಅಲೆ ಕಂಡುಬರುತ್ತಿದ್ದು, ಬಿಜೆಪಿ ಸಾಕು ಕಾಂಗ್ರೆಸ್ ಬೇಕು ಎಂಬ ಮಾತುಗಳು ಮತದಾ ರರಿಂದ ವ್ಯಕ್ತವಾಗುತ್ತಿವೆ. 5 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ ನಡೆಸಿದ ಅನಾಚಾರ, ಭ್ರಷ್ಟಾಚಾರ, ವ್ಯಭಿಚಾರದಿಂದ ಮತದಾರರಿಗೆ ಬಿಜೆಪಿ ಬಗ್ಗೆ ಜಿಗುಪ್ಸೆ ಹುಟ್ಟಿದೆ. ಇಂತಹ ಸನ್ನಿವೇಶದಲ್ಲಿ ಇತ್ತೀಚೆಗಷ್ಟೆ ಹುಟ್ಟಿಕೊಂಡ ಪಕ್ಷಗಳು ಕಾಂಗ್ರೆಸ್ ಬಗ್ಗೆ ಅಪಪ್ರಚಾರದಲ್ಲಿ ತೊಡಗಿವೆ ಎಂದವರು ಆರೋಪಿಸಿದರು

No comments:

Post a Comment